ಒಂದೇ ಕ್ಷೇತ್ರದಲ್ಲಿ ಕಣಕ್ಕಿಳಿದ ವಿಚ್ಛೇದಿತ ದಂಪತಿ! - Mahanayaka

ಒಂದೇ ಕ್ಷೇತ್ರದಲ್ಲಿ ಕಣಕ್ಕಿಳಿದ ವಿಚ್ಛೇದಿತ ದಂಪತಿ!

sumithra khan sujatha
11/03/2024


Provided by

ಪಶ್ಚಿಮ ಬಂಗಾಳ: 2024  ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ಆರಂಭಿಸಿದೆ. ಈ ನಡುವೆ ಪಶ್ಚಿಮ ಬಂಗಾಳದ ಬಿಷ್ಣುಪುರ ಕ್ಷೇತ್ರ ಇಡೀ ದೇಶದ ಗಮನ ಸೆಳೆದಿದೆ. ಇಲ್ಲಿ ವಿಚ್ಚೇದಿತ ದಂಪತಿ ಬೇರೆ ಬೇರೆ ಪಕ್ಷಗಳಿಂದ ಒಂದೇ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಬಂಕುರಾ ಜಿಲ್ಲೆಯ ಬಿಷ್ಣುಪುರ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಸೌಮಿತ್ರಾ ಖಾನ್‌ ಗೆ ಬಿಜೆಪಿ ಟಿಕೆಟ್ ನೀಡಿದೆ. ಅದೇ ಸ್ಥಾನದಿಂದ ಸೌಮಿತ್ರಾ ಖಾನ್‌ ಅವರ ಮಾಜಿ ಪತ್ನಿ ಸುಜಾತಾ ಮಂಡಲ್ ಅವರಿಗೆ ಟಿಎಂಸಿ ಟಿಕೆಟ್ ನೀಡಿದೆ.

2021ರಲಿ ನಡೆದ ವಿಧಾನ ಸಭಾ ಚುನಾವಣೆಗೂ ಮೊದಲು ಈ ದಂಪತಿ ಬೇರ್ಪಟ್ಟಿದ್ದು, ಇದೀಗ ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದಾರೆ. ಕಳೆದ ಚುನಾವಣೆ ಸಂದರ್ಭದಲ್ಲಿ ಸುಜಾತಾ ಮಂಡಲ್ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದರು.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ. ಪಶ್ಚಿಮ ಬಂಗಾಳದಲ್ಲಿ, ಟಿಎಂಸಿ ಎಲ್ಲಾ ಸ್ಥಾನಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಮೂಲಕ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಎಲ್ಲಾ ಊಹಾಪೋಹಗಳಿಗೆ ಸಂಪೂರ್ಣ ತೆರೆ ಎಳೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ