ಕಂಠಪೂರ್ತಿ ಕುಡಿದು ರಾತ್ರಿ ವೇಳೆ ರಸ್ತೆಗೆ ಅಡ್ಡ ಮಲಗಿದ ಕುಡುಕ: ಬೆಚ್ಚಿಬಿದ್ದ ವಾಹನ ಸವಾರರು!

11/01/2024
ಕೊಟ್ಟಿಗೆಹಾರ: ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆಯೇ ವ್ಯಕ್ತಿಯೋರ್ವ ಮಲಗಿರುವ ಘಟನೆ ಮೂಡಿಗೆರೆಯಿಂದ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ನಡೆದಿದೆ.
ರಸ್ತೆಯಲ್ಲಿ ವ್ಯಕ್ತಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ವಾಹನ ಚಾಲಕರು ಎಷ್ಟೇ ಬಾರಿ ಹಾರ್ನ್ ಮಾಡಿದರೂ ಮೇಲಕ್ಕೆ ಏಳದ ಭೂಪ, ಕೆಲ ಕಾಲ ಆತಂಕ ಸೃಷ್ಟಿಸಿದ್ದಾನೆ.
ವಾಹನದ ಹಾರ್ನ್ ಗೆ ಕೊನೆಗೂ ಎದ್ದ ವ್ಯಕ್ತಿ, ವಾಹನ ಹೋದ ನಂತರ ಮತ್ತೆ ಅದೇ ಜಾಗದಲ್ಲಿ ಮಲಗಿದ್ದಾನೆ. ವ್ಯಕ್ತಿಯ ಹುಚ್ಚಾಟದಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ರಾತ್ರಿ ಹೀಗೆ ಮಲಗಿದರೆ ಯಾವುದಾದರೂ ವಾಹನ ಮೇಲೆ ಹತ್ತಿದರೆ, ಆ ಇವನೂ ಸಾಯುತ್ತಾನೆ, ವಾಹನ ಸವಾರನೂ ಜೈಲಿಗೆ ಹೋಗಬೇಕಾಗುತ್ತದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ.
ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.