ಹೈ—ಟೆನ್ಷನ್ ವಿದ್ಯುತ್ ಕಂಬ ಏರಿ ಕುಳಿತ ರೈತ!

ಚಿಕ್ಕಮಗಳೂರು: ಅರಣ್ಯ ಇಲಾಖೆ — ಹೆದ್ದಾರಿ ಪ್ರಾಧಿಕಾರದ ವಿರುದ್ಧ ರೈತ ಏಕಾಂಗಿ ಪ್ರತಿಭಟನೆ ಪ್ರತಿಭಟನೆ ನಡೆಸಿದ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ.
ಪೊಲೀಸರು ದೌರ್ಜನ್ಯದ ವಿರುದ್ಧ ಹೈ—ಟೆನ್ಷನ್ ವಿದ್ಯುತ್ ಕಂಬ ಏರಿ ಕುಳಿತ ರೈತ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆದಿದ್ದಾರೆ. ಅರಣ್ಯ ಇಲಾಖೆ–ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾರದಿಂದ ರೈತ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ರೆ ಪ್ರತಿಭಟನೆ ಜಾಗದಿಂದ ಪೊಲೀಸರು ಬ್ಯಾನರ್ ಕಿತ್ತುಕೊಂಡು ಹೋಗಿದ್ದಾರೆ.
ಸಮರ್ಪಕವಾಗಿ ಪರಿಹಾರ ನೀಡದ ಹೆದ್ದಾರಿ ಪ್ರಾಧಿಕಾರ, ಅರಣ್ಯ ಇಲಾಖೆ ಸತಾಯಿಸುತ್ತಿದೆ ಎಂದು ರೈತ ಆಕ್ರೋಶ ವ್ಯಕ್ತಪಡಿಸಿದರು. 22 ರೈತರ 3 ಎಕರೆ 30 ಗುಂಟೆ ತೋಟ ಹೆದ್ದಾರಿಗೆಂದು ಹೋಗಿದೆ, 3 ಎಕರೆ 30 ಗುಂಟೆಯಲ್ಲಿ ಶ್ರೀಗಂಧದ ಮರವನ್ನು 22 ರೈತರು ಬೆಳೆದಿದ್ದರು.
62 ಕೋಟಿ ರೂ. ಪರಿಹಾರ ನೀಡುವ ಜಾಗದಲ್ಲಿ ಒಂದೂವರೆ ಕೋಟಿ ಎಂದು ಅಧಿಕಾರಿಗಳು ನಮೂದಿಸಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಪೊಲೀಸರು ಬ್ಯಾನರ್ ಕಿತ್ತುಕೊಂಡಿದ್ದಾರೆ ಎಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯುತ್ ಕಂಬ ಏರಿ ಪೊಲೀಸರು–ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD