ಜಾನುವಾರು ಮೇಯಿಸಲು ಹೋಗಿದ್ದ ರೈತ ವಿದ್ಯುತ್ ಸ್ಪರ್ಶಿಸಿ ಸಾವು! - Mahanayaka

ಜಾನುವಾರು ಮೇಯಿಸಲು ಹೋಗಿದ್ದ ರೈತ ವಿದ್ಯುತ್ ಸ್ಪರ್ಶಿಸಿ ಸಾವು!

nagesh gowdru
15/07/2025

ಚಿಕ್ಕಮಗಳೂರು: ವಿದ್ಯುತ್ ತಂತಿ ಸ್ವರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ

ಬೈರಾಪುರ ಗ್ರಾಮದ ಕೃಷಿಕರಾದ ನಾಗೇಶ್ ಗೌಡ (72 ವರ್ಷ) ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.
ನಾಗೇಶ್ ಗೌಡ ಅವರು ಇಂದು ಮಂಗಳವಾರ ಮಧ್ಯಾಹ್ನ ತಮ್ಮ ಜಾನುವಾರುಗಳನ್ನು ಮೇಯಿಸಲು ತೆರಳಿದ್ದ ವೇಳೆ ಬೈರಾಪುರ ಸರ್ಕಾರಿ ಶಾಲೆಯ ಸಮೀಪ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

11 ಕೆಂ.ವಿ. ವಿದ್ಯುತ್ ಪವರ್ ಲೈನ್ ಕಂಬದ ಬಳಿ ವಿದ್ಯುತ್ ಗ್ರೌಂಡ್ ಆಗಿದ್ದು ಘಟನೆಗೆ ಕಾರಣ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಆ ಸ್ಥಳದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋದಾಗ ನಾಗೇಶ್ ಗೌಡರಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕು.
ನಾಗೇಶ್ ಗೌಡ ಅವರು ಗ್ರಾಮದ ಹಿರಿಯ ಕೃಷಿಕರಾಗಿದ್ದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.

ಸ್ಥಳಕ್ಕೆ ಗೋಣಿಬೀಡು ಪೊಲೀಸರು ಮತ್ತು ಮೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ