ಕಾಡುಕೋಣ ದಾಳಿಗೆ ತೋಟದ ಕಾರ್ಮಿಕ ಮಹಿಳೆ ದಾರುಣ ಸಾವು! - Mahanayaka

ಕಾಡುಕೋಣ ದಾಳಿಗೆ ತೋಟದ ಕಾರ್ಮಿಕ ಮಹಿಳೆ ದಾರುಣ ಸಾವು!

chikkamagaluru news
08/07/2026

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಾಡುಕೋಣವೊಂದರ ಭೀಕರ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ನಡೆದಿದೆ.

ಬಿಳಗುಳಿ ಗ್ರಾಮದ ನಿವಾಸಿಯಾದ ಶೀಲಾ (52) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತ ಶೀಲಾ ಅವರು ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಒಮ್ಮಿಂದೊಮ್ಮೆಗೆ ಕಾಡುಕೋಣವೊಂದು ಅವರ ಮೇಲೆರಗಿದೆ. ದಾಳಿಯ ತೀವ್ರತೆಗೆ ಕಾಡುಕೋಣವು ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆಯ ಭಾಗಕ್ಕೆ ಬಲವಾಗಿ ತಿವಿದಿದೆ ಎನ್ನಲಾಗಿದೆ. ಇದರಿಂದಾಗಿ ತೀವ್ರ ರಕ್ತಸ್ರಾವ ಉಂಟಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗ ಮಧ್ಯದಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸದ್ಯ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸ್ಥಳೀಯವಾಗಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವುದು ಸಾರ್ವಜನಿಕರು ಹಾಗೂ ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ