SSLC ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉತ್ತೀರ್ಣಳಾಗಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ!

meena sslc
10/05/2024

ಕೊಡಗು: SSLC  ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉತ್ತೀರ್ಣಳಾಗಿದ್ದ ಬಾಲಕಿಯೋರ್ವಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರಪೇಟೆಯ ಸೂರ್ಲಬ್ಬಿ  ಗ್ರಾಮದಲ್ಲಿ ನಡೆದಿದೆ.

ಮೀನಾ ಬರ್ಬರವಾಗಿ ಹತ್ಯೆಗೀಡಾದ ಬಾಲಕಿಯಾಗಿದ್ದು, ಈಕೆ ಸೂರ್ಲಬಿ ಸರ್ಕಾರಿ ಪ್ರೌಢ ಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಗ್ರಾಮಕ್ಕೆ ಕೀರ್ತಿ ತಂದಿದ್ದಳು. ಇದೇ ಖುಷಿಯಲ್ಲಿದ್ದ ಬಾಲಕಿ ಸಂಜೆ ವೇಳೆ ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ.

ಪ್ರಕಾಶ್ (32) ಎಂಬಾತನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್ ಆಗಿತ್ತು. ಬಾಲ್ಯ ವಿವಾಹದ ಹಿನ್ನೆಲೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದರು. ಹೀಗಾಗಿ ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದರು.

ಈ ನಡುವೆ ಆರೋಪಿ ಪ್ರಕಾಶ್ ಮತ್ತೆ ಮೀನಾಳ ಮನೆಗೆ ಆಗಮಿಸಿದ್ದನು.  ಸಂಜೆ ವೇಳೆ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು  ತಲೆ ಕತ್ತರಿಸಿ ರುಂಡ ಮುಂಡ ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಿ ವಿಕೃತಿ ಮೆರೆದಿದ್ದಾನೆ.

ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.  ಆರೋಪಿಯ ಬಂಧನದ ಬಳಿಕ ಹೆಚ್ಚಿನ ವಿವರ ಲಭ್ಯವಾಗಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version