ವಿವಾಹಿತ ಮಹಿಳೆಗಾಗಿ ಇಬ್ಬರ ನಡುವೆ ಜಗಳ: ಬೀಸಿದ ಲಾಂಗ್ ಗೆ ಸಿಕ್ಕಿ ತುಂಡಾಯ್ತು ಒಬ್ಬನ ಹಸ್ತ! - Mahanayaka

ವಿವಾಹಿತ ಮಹಿಳೆಗಾಗಿ ಇಬ್ಬರ ನಡುವೆ ಜಗಳ: ಬೀಸಿದ ಲಾಂಗ್ ಗೆ ಸಿಕ್ಕಿ ತುಂಡಾಯ್ತು ಒಬ್ಬನ ಹಸ್ತ!

polices
24/06/2026

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಿವಾಹಿತ ಮಹಿಳೆಯೊಬ್ಬಳಿಗಾಗಿ ಇಬ್ಬರು ಪುರುಷರು ಪರಸ್ಪರ ಕಿತ್ತಾಡಿಕೊಂಡಿದ್ದು, ಈ ಭೀಕರ ಜಗಳದಲ್ಲಿ ಒಬ್ಬನ ಹಸ್ತ ಸಂಪೂರ್ಣವಾಗಿ ಕತ್ತರಿಸಿ ಹೋಗಿದೆ.

ಗಂಡನಿಂದ ದೂರವಿದ್ದ ಮಹಿಳೆಗಾಗಿ ಶೇಷಗಿರಿ (40) ಮತ್ತು ಅರುಣ್ (35) ಎಂಬ ಇಬ್ಬರ ನಡುವೆ ಜೋರಾದ ಗಲಾಟೆ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿದಾಗ, ಶೇಷಗಿರಿ ಎಂಬಾತ ಅರುಣ್‌ ನ ಮೇಲೆ ಲಾಂಗ್ (ಮಚ್ಚು) ಬೀಸಿದ್ದಾನೆ. ಈ ವೇಳೆ ತನ್ನನ್ನು ರಕ್ಷಿಸಿಕೊಳ್ಳಲು ಅರುಣ್ ಕೈ ಅಡ್ಡ ಕೊಟ್ಟಿದ್ದಾನೆ. ಪರಿಣಾಮವಾಗಿ, ಬೀಸಿದ ಲಾಂಗ್‌ ನ ರಭಸಕ್ಕೆ ಅರುಣ್‌ ನ ಹಸ್ತ ಸಂಪೂರ್ಣವಾಗಿ ತುಂಡಾಗಿ ನೆಲಕ್ಕೆ ಬಿದ್ದಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅರುಣ್‌ನನ್ನು ತಕ್ಷಣವೇ ಚಿಕ್ಕಮಗಳೂರಿನ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಭೀಕರ ಘಟನೆಗೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ