2:50 PM Tuesday 30 - December 2025

ಸಿಗರೇಟ್ ವಿಚಾರಕ್ಕೆ ಬಾರ್‌ ನಲ್ಲಿ ಗಲಾಟೆ; ಯುವಕನಿಗೆ ಚಾಕು ಇರಿತ

chikkamagaluru crime
30/12/2025

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಸಿಗರೇಟ್ ವಿಚಾರವಾಗಿ ಎರಡು ತಂಡಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಯುವಕನೊಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಹೊರವಲಯದ ಶಕ್ತಿನಗರದಲ್ಲಿ ನಡೆದಿದೆ.

ಘಟನೆಯ ವಿವರ: ಶಕ್ತಿನಗರದ ಅಕ್ಷಯ್ ಬಾರ್‌ ನಲ್ಲಿ ಸಿಗರೇಟ್ ಕೇಳುವ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಜಗಳ ತಾರಕಕ್ಕೇರಿದಾಗ ಆರೋಪಿ ಯುವಕ ಏಕಾಏಕಿ ಬಾರ್ ಒಳಗಿನಿಂದ ಚಾಕು ತಂದು ಎದುರಾಳಿ ತಂಡದ ಅನಿಲ್ ಕುಮಾರ್ ಎಂಬುವವರಿಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಕು ಇರಿತಕ್ಕೊಳಗಾದ ಅನಿಲ್ ಕುಮಾರ್ ಮೂಗ್ತಿಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಪ್ರಸ್ತುತ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಸಿಟಿವಿಯಲ್ಲಿ ಸೆರೆ: ಬಾರ್‌ನಲ್ಲಿ ನಡೆದ ಈ ಭೀಕರ ಗಲಾಟೆ ಮತ್ತು ಚಾಕು ಇರಿತದ ದೃಶ್ಯಗಳು ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಚಾಕು ಇರಿದ ಯುವಕನನ್ನು ಈಗಾಗಲೇ ವಶಕ್ಕೆ ಪಡೆದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version