ಬಾವಿಗೆ ಹಾರಿದ್ದ ಮಹಿಳೆಯನ್ನು ರಕ್ಷಿಸಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿಯೂ ಸಾವು!

well
13/10/2025

ಕೊಲ್ಲಂ: ಬಾವಿಗೆ ಹಾರಿದ್ದ ಮಹಿಳೆಯನ್ನು ರಕ್ಷಿಸಲು ಬಾವಿಗಿಳಿದಿದ್ದ ಅಗ್ನಿಶಾಮಕದಳ ಸಿಬ್ಬಂದಿಯೂ ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂನ  ನೆಡುವತ್ತೂರಿನಲ್ಲಿ ನಡೆದಿದೆ.

ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ.

ಭಾನುವಾರ ಮಧ್ಯರಾತ್ರಿಯ ಸುಮಾರಿಗೆ, ನೆಡುವತ್ತೂರಿನಲ್ಲಿ 80 ಅಡಿ ಆಳದ ಬಾವಿಗೆ ಮಹಿಳೆಯೊಬ್ಬರು ಹಾರಿದ್ದಾರೆ ಎಂದು ಮಾಹಿತಿ ಬಂದಿತು. ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಕಾರ್ಯಾಚರಣೆ ಆರಂಭಿಸಿತು. ಕುಮಾರ್ ಅವರು ಸುರಕ್ಷತಾ ಸಾಧನಗಳನ್ನು ಧರಿಸಿ ಬಾವಿಗೆ ಇಳಿಯುತ್ತಿದ್ದಂತೆ, ಬಾವಿಗೆ ಹಾಕಿದ್ದ ತಡೆಗೋಡೆ ಕುಸಿದು ಅರ್ಚನಾ ಮತ್ತು ಕುಮಾರ್‌ ಅವರ ಮೇಲೆ ಬಿದ್ದಿದೆ. ಅದೇ ವೇಳೆ ಹತ್ತಿರದಲ್ಲಿ ನಿಂತಿದ್ದ ಶಿವಕೃಷ್ಣನ್ ಕೂಡ ಬಾವಿಗೆ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮೂವರನ್ನು ಬಾವಿಯಿಂದ ಹೊರತಂದು, ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version