ಆಳ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿ: 7 ಮೀನುಗಾರರ ರಕ್ಷಣೆ

ಉಡುಪಿ: ಮೀನುಗಾರಿಕೆಗೆ ಮಲ್ಪೆ ಬಂದರಿನಿಂದ ತೆರಳಿದ್ದ ದೋಣಿಯೊಂದು ಮಹಾರಾಷ್ಟ್ರದ ರತ್ನಗಿರಿಯ ಆಳ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಪ್ರಕಾಶ್ ದೇವಾಡಿಗೆ ಎಂಬವರಿಗೆ ಸೇರಿದ ಅನಂತಕೃಷ್ಣ ಹೆಸರಿನ ಬೋಟ್ ರತ್ನಗಿರಿ ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ, ಏಕಾಏಕಿ ಬೋಟ್ ನೊಳಗೆ ನೀರು ನುಗ್ಗಿದೆ.ಈ ವೇಳೆ ಸಮೀಪದಲ್ಲಿದ್ದ ಮೀನಾಕ್ಷಿ, ಗಾಯತ್ರಿ ರಕ್ಷಾ ಎಂಬ ಹೆಸರಿನ ಬೋಟ್ ನವರು ತಕ್ಷಣವೇ 7 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.
ಇನ್ನೂ ಬೋಟ್ ನೀರಿನಲ್ಲಿ ಮುಳುಗಿ ಹೋಗಿದ್ದು, ಮಾಲಿಕರಿಗೆ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಮೀನು, ಬಲೆ, ಡೀಸೆಲ್ ಸೇರಿದಂತೆ 60 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth