ದೇವರಮನೆಯಲ್ಲಿ  ಪ್ರವಾಸಿಗರ ಮೇಲೆ ಕಾಡಾನೆ ದಾಳಿ - Mahanayaka

ದೇವರಮನೆಯಲ್ಲಿ  ಪ್ರವಾಸಿಗರ ಮೇಲೆ ಕಾಡಾನೆ ದಾಳಿ

devaramane
18/03/2024


Provided by

ಕೊಟ್ಟಿಗೆಹಾರ:ದೇವರಮನೆಯಲ್ಲಿ ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಮೂಡಿಗೆರೆ  ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ ದೇವರಮನೆ ರಸ್ತೆಯಲ್ಲಿ ಕಾಡಾನೆ ಬೈಕಿಗೆ ಅಡ್ಡ ಬಂದು ಅಟ್ಟಿಸಿಕೊಂಡು ಬಂದಿದೆ.

ತಕ್ಷಣ ಬೈಕ್ ಸವಾರರು ಓಡಿ ಹೋಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು  ಬೈಕ್ ಜಖಂಗೊಂಡಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಅಭಿಜಿತ್, ಬಣಕಲ್ ಠಾಣಾ ಪಿಎಸ್‌ ಐ ಎನ್.ಕೆ.ಓಮನಾ, ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ