ಬಿಸಿಲಿನ ತೀವ್ರತೆಗೆ, ನೀರು ಸಿಗದೇ ಕಾಡಾನೆ ಸಾವು - Mahanayaka

ಬಿಸಿಲಿನ ತೀವ್ರತೆಗೆ, ನೀರು ಸಿಗದೇ ಕಾಡಾನೆ ಸಾವು

elephant
07/04/2024


Provided by

ರಾಮನಗರ: ಬಿಸಿಲಿನ ತೀವ್ರತೆಗೆ ನಿತ್ರಾಣಗೊಂಡು ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಯಲವನತ್ತ ವನ್ಯಜೀವಿ ಸಂರಕ್ಷಣಾ ಪ್ರದೇಶದಲ್ಲಿ ನಡೆದಿದೆ.

ಕನಕಪುರ ವಲಯದ ಬೆಟ್ಟಹಳ್ಳಿ ಬೀಟ್​ ನಲ್ಲಿ  ಘಟನೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ನಿತ್ರಾಣಗೊಂಡಿದ್ದ 14 ವರ್ಷದ ಗಂಡಾನೆ ಕಾಡಂಚಿನಲ್ಲಿ ಸಾವನ್ನಪ್ಪಿದೆ.

ನಿತ್ರಾಣಗೊಂಡಿದ್ದ ಕಾಡಾನೆಗೆ ಅರಣ್ಯ ಸಿಬ್ಬಂದಿಗಳು ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕಾಡಾನೆ ಸಾವನ್ನಪ್ಪಿದೆ.

ಇತ್ತೀಚೆಗಷ್ಟೆ ನಿತ್ರಾಣಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಗಳು ಕಾಡಿಗಟ್ಟಿದ್ದರು. ಆದರೀಗ ಬಿಸಿಲಿನ ಬೇಗೆ ಹೆಚ್ಚುತ್ತಿದ್ದು, ಕಾಡಿನಲ್ಲಿ ನೀರು ಸಿಗದೆ ಆನೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಡಿಎಫ್ ಒ ರಾಮಕೃಷ್ಣಪ್ಪ, ಕನಕಪುರ ಎಸಿಎಫ್ ಗಣೇಶ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ