11:36 AM Saturday 23 - August 2025

ಬೀದಿ ನಾಯಿಗಳ ದಾಳಿಗೆ ಬಲಿಯಾದ ನಾಲ್ಕು ವರ್ಷದ ಬಾಲಕಿ!

lavanya
21/05/2024

ರಾಯಚೂರು:  ಬೀದಿ ನಾಯಿಗಳ ದಾಳಿಗೆ ನಾಲ್ಕು ವರ್ಷ ವಯಸ್ಸಿನ ಬಾಲಕಿಯೊಬ್ಬಳು ಸಾವಿಗೀಡಾದ ದಾರುಣ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ.

ಕೀರಲಿಂಗ ಅನ್ನೋರ ಮಗಳು  ಲಾವಣ್ಯ (4) ಬೀದಿ ನಾಯಿ ದಾಳಿಯಿಂದ ಮೃತಪಟ್ಟ ಬಾಲಕಿಯಾಗಿದ್ದಾಳೆ.  ಮನೆಯ ಬಳಿಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿವೆ. ಬಾಲಕಿಯ ಕತ್ತಿನ ಹಿಂಭಾಗಕ್ಕೆ ನಾಯಿ ಕಚ್ಚಿದ್ದು, ಆಳವಾದ ಗಾಯದಿಂದ ತೀವ್ರ ರಕ್ತ ಸ್ರಾವವಾಗಿತ್ತು. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಕಳೆದ 15 ದಿನಗಳಿಂದ ಕೊರವಿಹಾಳ ಗ್ರಾಮದ ಏಳು ಮಕ್ಕಳ ಮೇಲೆ ನಾಯಿ ದಾಳಿ ದಾಳಿ ಮಾಡಿದ್ದರೂ, ಸ್ಥಳೀಯ ಆಡಳಿತ ಕ್ರಮಕೈಗೊಂಡಿರಲಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ.

ಘಟನೆ ಬಳಿಕ ಬೀದಿ ನಾಯಿಯನ್ನು ಗ್ರಾಮಸ್ಥರು ಸಾಯಿಸಿದ್ದಾರೆ. ಇತ್ತ ಬೀದಿ ನಾಯಿಯಿಂದ ಅವಾಂತರ ಸೃಷ್ಟಿಯಾದರೂ ಅಧಿಕಾರಿಗಳು ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ.

ಗಾಯಾಳು ಮಕ್ಕಳಿಗೆ ಪರಿಹಾರ, ಚಿಕಿತ್ಸಾ ವೆಚ್ಚವನ್ನು ಭರಿಸದೇ ಸಗಮಕುಂಟಾ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯವಹಿಸಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version