ಶಾಲೆಗೆ ಹೊರಟಿದ್ದ ಬಾಲಕಿ ಕುಸಿದು ಬಿದ್ದು ಸಾವು!

Mahanayaka –ಬಳ್ಳಾರಿ: ಶಾಲೆಗೆ ತೆರಳುತ್ತಿದ್ದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ.
ಕಾಳಂಗೇರಿ ದೀಕ್ಷಾ(12) ಮೃತಪಟ್ಟ ಬಾಲಕಿಯಾಗಿದ್ದಾಳೆ. ಈಕೆ 6ನೇ ತರಗತಿಯಲ್ಲಿ ಓದುತ್ತಿದ್ದು, ಶಾಲೆಗೆ ತೆರಳಲು ಎಂದಿನಂತೆ ಸಿದ್ಧಳಾಗಿ ಹೋಗುತ್ತಿದ್ದಳು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆ.
ತಕ್ಷಣ ಕುಟುಂಬಸ್ಥರು ಬಾಲಕಿಯನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಿದ್ದಾರೆ. ಆದರೆ ದಾರಿ ಮಧ್ಯೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ.
ದೀಕ್ಷಾಳ ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ, ಘಟನೆ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD