ಕುಡುಕ ಪತಿಯಿಂದ ಕಿರುಕುಳ: ಮನನೊಂದು ಮಹಿಳೆ ಸಾವಿಗೆ ಶರಣು

chamarajanagara
08/07/2023

ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಮಹಿಳೆ ಬಲಿಯಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಲಚವಾಡಿ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರದ ಮಲೆಯೂರು ಗ್ರಾಮದಿಂದ ಬಲಚವಾಡಿಯ ಮಂಜುನಾಥ್ ಗೆ ಕಳೆದ ಆರು ವರ್ಷದ ಹಿಂದೆ ರೂಪಾ ಜೊತೆಗೆ ವಿವಾಹವಾಗಿತ್ತು.   ಆದರೆ ಮದುವೆಯಾದ ಬಳಿಕ ಮಂಜುನಾಥ್ ದಿನ ನಿತ್ಯ  ಕುಡಿದು ಬಂದು ಜಗಳ ತೆಗೆಯುತ್ತಿದ್ದ ಎನ್ನಲಾಗಿದೆ.

ಪತಿಯ ನಿರಂತರ ಕಿರುಕುಳದಿಂದ ಬೇಸತ್ತ ರೂಪಾ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಪತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version