7ನೇ ತರಗತಿ ಬಾಲಕಿಯ ಮೇಲೆ ಹೇಯ ಕೃತ್ಯ: ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ - Mahanayaka

7ನೇ ತರಗತಿ ಬಾಲಕಿಯ ಮೇಲೆ ಹೇಯ ಕೃತ್ಯ: ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

rape case
02/12/2025

ಬೆಳಗಾವಿ: ಹಿಟ್ಟಿನ ಗಿರಣಿಗೆ ಹಿಟ್ಟು ರುಬ್ಬಿಸಿಕೊಂಡು ಬರಲು ತೆರಳಿದ್ದ ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ಮುರಗೋಡ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರದಿಗಳ ಪ್ರಕಾರ, ನವೆಂಬರ್ 23ರಂದು ಈ ಘಟನೆ ನಡೆದಿದೆ. ಬಾಲಕಿಯ ಕುಟುಂಬಸ್ಥರಿಗೆ ಬೆದರಿಕೆ ಇದ್ದ ಕಾರಣ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಗಳಾದ ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರ ಹಿಟ್ಟುಬೀಸಲು ತೆರಳಿದ್ದ ಬಾಲಕಿ ಮೇಲೆ ಕೃತ್ಯ ನಡೆಸಿದ್ದಾರೆ. ಮನೆಯಿಂದ ಮುನ್ನೂರು ಮೀಟರ್ ದೂರ ಇರುವ ಹಿಟ್ಟಿನ ಗಿರಣಿಗೆ ಹಿಟ್ಟು ರುಬ್ಬಿಸಿಕೊಂಡು ಬರಲು ಸಂತ್ರಸ್ತ ಬಾಲಕಿ ತೆರಳಿದ್ದ ವೇಳೆ ಆಕೆಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ.

ನಿನ್ನೆ(ಡಿ.1) ಘಟನೆ ಸಂಬಂಧ ದೂರು ನೀಡಲಾಗಿದ್ದು, ಮುರಗೋಡ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ