ಹಿಂದೂ ಮಹಿಳೆಯ ಸಮಯ ಪ್ರಜ್ಞೆಯಿಂದ ಉಳಿಯಿತು ಮೀನು ವ್ಯಾಪಾರಿಯ ಜೀವ! - Mahanayaka
9:36 PM Thursday 18 - September 2025

ಹಿಂದೂ ಮಹಿಳೆಯ ಸಮಯ ಪ್ರಜ್ಞೆಯಿಂದ ಉಳಿಯಿತು ಮೀನು ವ್ಯಾಪಾರಿಯ ಜೀವ!

luqman
02/05/2025

ಮಂಗಳೂರು:  ಮೀನು ವ್ಯಾಪಾರಿಯೊಬ್ಬರು ದುಷ್ಕರ್ಮಿಗಳ ದಾಳಿಯಿಂದ ಬಚಾವ್ ಆಗಿರುವ ಘಟನೆ ಮಂಗಳೂರಿನ ಕುಂಟಿಕಾನ ಬಳಿಯಲ್ಲಿ ನಡೆದಿದೆ. ಹಿಂದೂ ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಯುವಕನ ಜೀವ ಉಳಿದಿದೆ.

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಕರಾವಳಿಯ ವಿವಿಧೆಡೆಗಳಲ್ಲಿ ಅಹಿತಕರ ಘಟನೆ ನಡೆದಿದೆ. ಮುಂಜಾನೆ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬವರು ವ್ಯಕ್ತಿಯೊಬ್ಬರಿಗೆ ಮೀನು ನೀಡಲು ಕಾಯುತ್ತಿದ್ದರು. ಈ ವೇಳೆ ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ.

ಲುಕ್ಮಾನ್ ಅವರನ್ನು ಅಟ್ಟಾಡಿಸಿ ಕಲ್ಲು ಎತ್ತಿ ಹಾಕಿ ಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಇದನ್ನು ನೋಡಿದ ಹಿಂದೂ ಮಹಿಳೆ ಜೋರಾಗಿ ಬೊಬ್ಬೆ ಹಾಕಿದ್ದು, ಇದರಿಂದ ವಿಚಲಿತರಾದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಬಜ್ಪೆಯ ಕಿನ್ನಿಪದವು ಬಳಿ ರೌಡಿಶೀಟರ್ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿದ್ದರು.  ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದಲೇ ಇಡೀ ಮಂಗಳೂರು ಸ್ತಬ್ಧವಾಗಿತ್ತು. ಇಂದು ಬೆಳಗ್ಗೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ವಾತಾವರಣ ಇತ್ತು. ಮಂಗಳೂರಿನಲ್ಲಿ ಸಂಜೆಯ ವೇಳೆಗೆ ಜನ ಜೀವನ ಸಹಜ ಸ್ಥಿತಿಯತ್ತ ತಿರುಗಿದೆ. ಸಂಜೆ ವೇಳೆಗೆ ಜನರು ಅಗತ್ಯ ವಸ್ತುಗಳಿಗಾಗಿ ಹೊರ ಬಂದಿದ್ದು, ಹಾಲು, ದಿನಸಿ ಅಂಗಡಿಗಳು, ತರಕಾರಿ ಅಂಗಡಿಗಳು ತೆರೆದಿವೆ. ನಾಳೆ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ