ಭಾರೀ ಮಳೆಗೆ ರಸ್ತೆಗುರುಳಿದ ಬೃಹತ್ ಗಾತ್ರದ ಮರ!

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರೀ ಗಾಳಿ-ಮಳೆಗೆ ಬೃಹತ್ ಮರ ಧರೆಗುರುಳಿದೆ.
ರಾಜ್ಯ ಹೆದ್ದಾರಿಗೆ ಭಾರೀ ಗಾತ್ರದ ಮರ ಅಡ್ಡ ಬಿದ್ದಿದೆ. ಕಳಸ ತಾಲೂಕಿನ ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮರ ಬಿದ್ದ ಪರಿಣಾಮ ಕಳಸ–ಮಂಗಳೂರು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಮಳೆ ಮಧ್ಯೆಯೂ ಸ್ಥಳೀಯರು ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.
ಬೆಳಗ್ಗೆಯಿಂದ ಕಳಸ, ಕುದುರೆಮುಖ ವ್ಯಾಪ್ತಿಯಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದೆ. ಇದರಿಂದಾಗಿ ಮರ ರಸ್ತೆಗುರುಳಿದೆ. ಮಳೆ ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97