11:55 AM Saturday 12 - September 2026

 ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಜಾಲಿ ಟ್ರಿಪ್: ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ಫೈನ್!

ambulance
12/11/2023

ಕೊಟ್ಟಿಗೆಹಾರ: ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಒರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ರು. ಆದ್ರೆ ಕೊಟ್ಟಿಗೆಹಾರ ಅಗಿ ಉಜಿರೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ ಅದರಂತೆ ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500/- ಫೈನ್ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version