ಮೀನು ಹಿಡಿಯಲು ಹೋಗಿದ್ದ ಕಾರ್ಮಿಕ ಕೆರೆಯಲ್ಲಿ ಮುಳುಗಿ ಸಾವು
ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಜಿ.ಹೊಸಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಜಿ.ಹೊಸಹಳ್ಳಿ ಲಕ್ಷ್ಮಯ್ಯ ಎಂಬುವವರ ಕಾಫಿ ಎಸ್ಟೇಟ್ ನ ಕೆರೆಯಲ್ಲಿ ಮುಳುಗಿ ಕಾರ್ಮಿಕ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಮೂಲದ ತಿಮ್ಮಯ್ಯ(55 ವರ್ಷ) ಮೃತ ಕಾರ್ಮಿಕ.
ತಿಮ್ಮಯ್ಯ ಮತ್ತು ಅವರ ಸಂಗಡಿಗರು ಜಿ. ಹೊಸಹಳ್ಳಿ ಲಕ್ಷ್ಮಯ್ಯ ಅವರ ತೋಟದಲ್ಲಿ ಪೈಪ್ ಲೈನಿಗೆ ಚರಂಡಿ ಹೊಡೆಯಲು ಬಂದಿದ್ದರು ಎನ್ನಲಾಗಿದೆ.
ಕೆಲಸ ಮುಗಿಸಿ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸಮಾಜ ಸೇವಕ ಫಿಶ್ ಮೋಣು ತಂಡದ ಸದಸ್ಯರು ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: