ಆಂಧ್ರಪ್ರದೇಶದಿಂದ ಮಂಗಳೂರು, ಬೆಂಗಳೂರು, ಕೇರಳಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಗಾಂಜಾ ವಶ

ganja case
18/11/2022

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರ, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 132 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಟ್ವಾಳದ ರಮೀಝ್ ರಾಝ್ ಮತ್ತು ಮಂಜೇಶ್ವರದ ಅಬ್ದುಲ್ ಖಾದರ್ ಹ್ಯಾರಿಸ್ ಬಂಧಿತರು. ನ.17 ರಂದು ಇಬ್ಬರು ಕೇರಳ ನೋಂದಣಿಯ ಎಸ್‌ಯುವಿ ಕಾರಿನಲ್ಲಿ ವಿಶಾಖಪಟ್ಟಣದಿಂದ ಗಾಂಜಾವನ್ನು ತಂದಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಖಚಿತ ಮಾಹಿತಿ ದೊರೆತಿದ್ದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್‌ ಐ ರಾಜೇಂದ್ರ ಬಿ ನೇತೃತ್ವದ ಸಿಸಿಬಿ ಪೊಲೀಸರ ತಂಡ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪುವಿನ ಕುರ್ನಾಡು ಗ್ರಾಮದ ಕಾಯರ್‌ ಗೋಳಿ ಎಂಬಲ್ಲಿ ಆರೋಪಿಗಳ ಕಾರು ಪತ್ತೆ ಹಚ್ಚಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ.

ಆರೋಪಿಗಳು ಬಳಕೆಗೆ ಸಿದ್ದವಾಗಿದ್ದ ಗಾಂಜಾವನ್ನು ಮಾದಕವಸ್ತು ವ್ಯಾಪಾರಿಗಳಿಗೆ ವಿತರಿಸಲು ಕೊಂಡೊಯ್ಯುತ್ತಿದ್ದರು. ಕೇರಳ, ಮಣಿಪಾಲ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳಿಗೆ ವ್ಯಾಪಾರಿಗಳಿಗೆ ನೀಡಲೆಂದು ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version