ಕಾಡಿನಿಂದ ನಾಡಿಗೆ ಬಂದು, ಮನೆಯೊಳಗೆ ಅವಿತು ಕುಳಿತ ಚಿರತೆ! - Mahanayaka

ಕಾಡಿನಿಂದ ನಾಡಿಗೆ ಬಂದು, ಮನೆಯೊಳಗೆ ಅವಿತು ಕುಳಿತ ಚಿರತೆ!

leopard
06/08/2025


Provided by

ಹಾವೇರಿ:  ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆ(Leopard)ಯೊಂದು ಮನೆಯೊಂದರೊಳಗೆ ಪ್ರವೇಶಿಸಿ ಅವಿತು ಕುಳಿತ ಘಟನೆ   ಹಾವೇರಿ(Haveri) ಜಿಲ್ಲೆಯ ರಾಣೆಬೆನ್ನೂರು ನಗರದ ನಾಡಗೇರ್ ಓಣಿಯಲ್ಲಿ ನಡೆದಿದೆ.

ಮನೆಯಲ್ಲಿ ಅವಿತು ಕುಳಿತಿದ್ದ ಚಿರತೆಯನ್ನು ಕಂಡು ಬೆಚ್ಚಿಬಿದ್ದ ಮನೆಯವರು ಗ್ರಾಮಸ್ಥರಿಗೆ ತಿಳಿಸಿದ್ದು, ಸದ್ಯ ಚಿರತೆಯನ್ನು ಸೆರೆ ಹಿಡಿಯಲು ಸ್ಥಳಕ್ಕೆ 25ಕ್ಕೂ ಅಧಿಕ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದಾರೆ.

ಜಿಲ್ಲಾ ಅರಣ್ಯಾಧಿಕಾರಿ, ಎಸ್ ಪಿ ಯಶೋಧಾ ವಂಟಗೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಅರವಳಿಕೆ ತಜ್ಞರು ಆಗಮಿಸಿದ್ದಾರೆ.  ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಕ್ಯಾಮರಾ ಬಳಸಿ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಅರಣ್ಯಾ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಚಿರತೆ ಮನೆಯೊಳಗೆ ಇರುವ ವಿಚಾರ ತಿಳಿದು ಸ್ಥಳೀಯರು ಸಾಕಷ್ಟು ಸಂಖ್ಯೆಯಲ್ಲಿ ಸ್ಥಳದಲ್ಲಿ ನೆರೆದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ