ಬೈಕಿಗೆ ತರಕಾರಿ ತುಂಬಿದ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

chikkamagaluru
14/11/2023

ಮೂಡಿಗೆರೆ: ತಾಲೂಕಿನ ಬಿದರಹಳ್ಳಿ ಯ ಪಟ್ಟಣದಲ್ಲಿ ಘಟನೆ ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಮಂಗಳೂರಿಗೆ ಹೋಗ್ತಿದ್ದ ಲಾರಿ  ಎದುರು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮಂಜುನಾಥ್ (30)  ಸ್ಥಳದಲ್ಲೇ ಮೃತ ಪಟ್ಟ ಬೈಕ್ ಸವಾರರಾಗಿದ್ದಾರೆ.  ಯುವಕ ತಂದೆ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಂದೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತ ಯುವಕ ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿಯಾಗಿದ್ದ. ಲಾರಿ ಚಾಲಕನ ಅವಸರದಿಂದಲೇ ಅಪಘಾತದ ರಭಸಕ್ಕೆ ಮೃತದೇಹವನ್ನ 1 ಕಿ.ಮೀ. ಎಳೆದೊಯ್ದ ಲಾರಿಯೂ ಪಲ್ಟಿಯಾಗಿದೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

Exit mobile version