ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತ ಅಗತ್ಯವಿದೆ: ಸಂಸದ ಅನಂತ್‌ ಕುಮಾರ್‌ ಹೆಗಡೆ

ananth kumar hegde
10/03/2024

ಕಾರವಾರ: ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತ ಅಗತ್ಯವಿದೆ, ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ವಿವಾದಿತ ಸಂಸದ ಅನಂತ್‌ ಕುಮಾರ್‌ ಹೆಗಡೆ ಕರೆ ನೀಡಿದ್ದಾರೆ.

ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತದ ಅಗತ್ಯವಿದೆ ಎಂದು ಕಾರ್ಯಕರ್ತರಿಗೆ ಒತ್ತಿ ಹೇಳಿದರು.

ಕಾಂಗ್ರೆಸ್‌ ನವರು ಸಂವಿಧಾನದ ಮೂಲರೂಪವನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನು ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ಕಾನೂನು ತಂದಿದ್ದಾರೆ. ಇದೆಲ್ಲವೂ ಬದಲಾಗಬೇಕಿದ್ದರೆ, ಬಹುಮತ ಇಲ್ಲದಿದ್ದರೆ ಆಗುವುದಿಲ್ಲ, ರಾಜ್ಯಸಭೆಯಲ್ಲಿ ಕೂಡ ನಮಗೆ ಬಹುಮತ ಬೇಕಿದೆ ಎಂದು ಅವರು  ಹೇಳಿದರು.

ಕಾಂಗ್ರೆಸ್‌ ನವರೇ ಹೆಚ್ಚು ಇದ್ದರೆ, ಏನೇ ತಿದ್ದುಪಡಿ ತಂದರೂ ಪಾಸ್‌ ಆಗಲ್ಲ, ಸಿಎಎ ಜಾರಿಗೆ  ರಾಜ್ಯಗಳಿಂದ ಒಪ್ಪಿಗೆ ಬಂದಿಲ್ಲ, ಸಿಎಎ ತರದಿದ್ದರೆ, ದೇಶದ ಕಾನೂನು ನಮ್ಮ ಕೈಯಲಲ್ಿ‌ ಇರಲ್ಲ‌, ದೇಶದ್ರೋಹಿಗಳ ಆಡಂಬರವಾಗುತ್ತದೆ ಎಂದು ಅವರು ಆರೋಪಿಸಿದರು.

ಬಹುಮತ ಬರಲಿ ಆಮೇಲೆ ನೋಡಿ ಮಾರಿ ಜಾತ್ರೆ ಹೇಗಿರುತ್ತೆ ಅಂತಾ, ಜಾತ್ರೆಗೆ ಒಂದು ಕಳೆ ಬರೋದು ಇದಾದ ನಂತರವೇ ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version