10:57 PM Wednesday 15 - October 2025

ವಾಕಿಂಗ್ ಹೋಗಿದ್ದ ಮಹಿಳೆಯ ಮೇಲೆ ವ್ಯಕ್ತಿಯಿಂದ ದಾಳಿ!: ಬೆಚ್ಚಿಬಿದ್ದ ಜನ

walking
09/08/2024

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ  ಮಾರಣಾಂತಿಕ ದಾಳಿ ನಡೆಸಿರುವ ಘಟನೆ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯ ಸಹಕಾರ ನಗರದಲ್ಲಿ ನಡೆದಿದೆ.

ಸುನೀತಾ(42) ಮಾರಣಾಂತಿಕ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಗೋಪಾಲ್ ಎಂಬಾತ ಕೃತ್ಯ ನಡೆಸಿದ ಆರೋಪಿಯಾಗಿದ್ದಾನೆ.

ಆಂಧ್ರಪ್ರದೇಶದ ಕಡಪ ಮೂಲದ ಮೂಲದ ಸುನೀತಾ ಇಬ್ಬರು ಮಕ್ಕಳ ಜೊತೆ ಬೆಂಗಳೂರಿನ ಸಹಕಾರ ನಗರದಲ್ಲಿ ವಾಸವಿದ್ದಾರೆ. ಅವರ ಗಂಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ.   ಸಂಜೆ ಮಗನನ್ನ ಪಾರ್ಕ್ ನಲ್ಲಿ ಆಟ ಆಡಿಸೋಕೆ ಅಂತ ಬಂದಿದ್ದು, ಇದೇ ವೇಳೆ ಎಟಿಎಂಗೆ ಹೋಗಲು ಬಂದಿದ್ದಾರೆ. ಈ ವೇಳೆ ಮೆಟ್ಟಿಲ ಮೇಲೆ ಕುಳಿತಿದ್ದವನಿಗೆ ಪಕ್ಕಕ್ಕೆ ಹೋಗಲು ಮಹಿಳೆ ಹೇಳಿದ್ದರು. ಇದರಿಂದ ಕೋಪಗೊಂಡ ಆತ ಮೂರು ನಾಲ್ಕು ಬಾರಿ ಮಹಿಳೆ ತಲೆಗೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ದಾನೆ.

ಈತನನ್ನು ತಕ್ಷಣವೇ ಸ್ಥಳೀಯರು ಹಿಡಿದು ಮಹಿಳೆಯನ್ನು ರಕ್ಷಿಸಿದ್ದು, ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಮಹಿಳೆಯ ತಲೆಗೆ ಗಂಭೀರವಾದ ಏಟು ಬಿದ್ದಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಬಂಧಿತ ಆರೋಪಿಯು ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೇ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿರುವುದಾಗಿ ತಿಳಿದು ಬಂದಿದೆ. ಆತನ ಬಗ್ಗೆ ಪೊಲೀಸರು ಹೆಚ್ಚು ಮಾಹಿತಿ ಸಂಗ್ರಹಿಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version