ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ
ಮಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕಾಗಿ ಕೇರಳಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ಚಲಿಸುವ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ನಿವಾಸಿ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ವಸಂತ ಪೂಜಾರಿ ಅವರು ಶಬರಿಮಲೆ ಯಾತ್ರೆ ಕೈಗೊಳ್ಳುವ ಉದ್ದೇಶದಿಂದ ಏಪ್ರಿಲ್ 17 ರಂದು ಮಂಗಳೂರಿನಿಂದ ರೈಲು ಹತ್ತಿದ್ದರು. ಪ್ರಯಾಣದ ವೇಳೆ ಕೇರಳದ ವ್ಯಾಪ್ತಿಯಲ್ಲಿ ರೈಲಿನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದಾರೆ. ಇದರಿಂದ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು.
ತಕ್ಷಣವೇ ಅವರನ್ನು ಕೇರಳದ ತ್ರಿಶೂರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ತಡರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಇಂದು (ಏಪ್ರಿಲ್ 19) ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ರವಾನಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























