ಇಂಗು ಗುಂಡಿಯಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿ ಅರೆಸ್ಟ್

ganja
29/06/2023

ಹನೂರು: ಜಮೀನಿನ ಇಂಗು ಗುಂಡಿಯಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯೋರ್ವನನ್ನು  ಹನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಅಂಡೆ ಕುರುಬನ ದೊಡ್ಡಿ ಗ್ರಾಮದ ಗುರುಸ್ವಾಮಿ (50) ಬಂಧಿತ ಆರೋಪಿಯಾಗಿದ್ದಾನೆ.

ಘಟನೆಯ ವಿವರ: ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಡೆ ಕುರುಬನ ದೊಡ್ಡಿ ಗ್ರಾಮದ ಗುರುಸ್ವಾಮಿ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ  ದೊರೆತ ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಶಶಿಕುಮಾರ್ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕ ರಾಜೇಂದ್ರ ಪ್ರಸಾದ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ 25 ಗಾಂಜಾ (20ಕೆಜಿ)ಗಿಡ ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ದಾಳಿಯಲ್ಲಿ ಪೇದೆಗಳಾದ ದೊಡ್ಡ ವೀರಶೆಟ್ಟಿ, ರಾಘವೇಂದ್ರ, ಮಂಜುನಾಥ್, ಮಣಿಕಂಠ, ರಾಜು ಚಾಲಕ ಶಿವಕುಮಾರ್ ಲೊಕ್ಕನಹಳ್ಳಿ ವೈದ್ಯಾಧಿಕಾರಿ ಎಸ್ ಎಸ್ ಪ್ರಸಾದ್, ಬೈಲೂರು ಪಿಡಿಒ ರಾಜು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version