ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕಾವಳಮೂಡೂರು ಎಂಬಲ್ಲಿ ನಡೆದಿದೆ.
ಪ್ರವೀಣ್ ಚಂದ್ರ ನಾಯಕ್ (45) ಮೃತರು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಛಾಯಾಗ್ರಾಹಕನಾಗಿದ್ದು, ಪಕ್ಷದ ಕ್ರಿಯಾಶೀಲ ಕಾರ್ಯಕರ್ತನಾಗಿದ್ದru.
ಪ್ರಗತಿ ಪರ ಕೃಷಿಕನಾಗಿಯೂ ಗುರುತಿಸಿಕೊಂಡಿದ್ದ ಪ್ರವೀಣ್ ಅವರು ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw