12:04 PM Tuesday 21 - October 2025

ಚಲಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ: ಮೂರು ಮಂದಿ ಸಾವು, 9 ಪ್ರಯಾಣಿಕರಿಗೆ ಗಂಭೀರ ಗಾಯ

train
03/04/2023

ಕೋಝಿಕ್ಕೋಡ್: ಚಲಿಸುತ್ತಿದ್ದ ರೈಲಿನ ಬೋಗಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಯೋರ್ವ ಪ್ರಯಾಣಿಕನೋರ್ವನಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಒಂಭತ್ತು ಮಂದಿಗೆ ಗಾಯಗಳಾಗಿವೆ.

ಭಾನುವಾರ ರಾತ್ರಿ 9.30ರ ಸುಮಾರಿನಲ್ಲಿ ಅಲಪ್ಪುವ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಕಣ್ಣೂರು ಜಿಲ್ಲೆಯ ಮಹಿಳೆ, ಸುಮಾರು ಎರಡು ವರ್ಷದ ಹೆಣ್ಣು ಮಗು ಮತ್ತು ಇನ್ನೊಬ್ಬ ವ್ಯಕ್ತಿಯ ಮೃತದೇಹಗಳು ರೈಲು ಹಳಿಯ ಮೇಲೆ ಪತ್ತೆಯಾಗಿವೆ. ಗಾಯಗೊಂಡಿರುವ 9 ಮಂದಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಅವರಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಪೆಟ್ರೋಲ್ ನಂತಹ ದ್ರವ ತುಂಬಿದ್ದ ಎರಡು ಬಾಟಲಿಗಳನ್ನು ತಂದಿದ್ದ ದುಷ್ಕರ್ಮಿ ‘ಡಿ1’ ಕೋಚ್ಗೆ ನುಗ್ಗಿ ಪ್ರಯಾಣಿಕರು ಮತ್ತು ರೈಲಿನ ಬೋಗಿಗೆ ಅದನ್ನು ಚೆಲ್ಲಿ, ಬೆಂಕಿ ಹಚ್ಚಿದ ಎಂದು ರೈಲಿನಲ್ಲಿದ್ದ ಕೆಲವು ಪ್ರಯಾಣಿಕರು ತಿಳಿಸಿದ್ದಾರೆ.

ಆರೋಪಿಯು ರೈಲಿಗೆ ಬೆಂಕಿ ಹಚ್ಚಲು ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ, ಘಟನೆಯ ಬಳಿಕ ರೈಲಿನಲ್ಲಿದ್ದವರು ತುರ್ತು ಸರಪಳಿ ಎಳೆದು ರೈಲು ನಿಲ್ಲಿಸಿದ್ದಾರೆ. ಘಟನೆಯ ನಂತರ ರೈಲಿನಲ್ಲಿದ್ದ ಮಹಿಳೆ ಮತ್ತು ಮಗು ಕಾಣೆಯಾಗಿದೆ ಎಂದು ಕೆಲವು ಪ್ರಯಾಣಿಕರು ದೂರಿದ್ದಾರೆ.

ಒಟ್ಟು ಒಂಬತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version