ಬಹುಕೋಟಿ ಹಗರಣ: 18 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ - Mahanayaka

ಬಹುಕೋಟಿ ಹಗರಣ: 18 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ

court order
24/11/2023


Provided by

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಸಂಬಂಧಿಸಿದ ಬಹುಕೋಟಿ ಹಗರಣದ 18 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿ ಇಂದು ಆದೇಶ ನೀಡಿದೆ.

ಉಡುಪಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಣಿ ನೀಡಿದ ಖಾಸಗಿ ದೂರಿನಂತೆ ಈ ಅವ್ಯವಹಾರದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತುತಲೆಮರೆಸಿಕೊಂಡಿದ್ದ ಆರೋಪಿಗಳಾದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ಲಿಮಿಟೆಡ್ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ಉಮಾನಾಥ್ ಶೆಟ್ಟಿ, ನಿರ್ದೇಶಕರುಗಳಾದ ಆಸ್ತಿಕ ಶಾಸ್ತ್ರಿ, ಸುಬ್ಬ ಬಿಲ್ಲವ, ಸಂತೋಷ್ ಕುಮಾರ್ ಶೆಟ್ಟಿ, ಸನ್ಮತ್ ಹೆಗ್ಡೆ, ರತ್ನಾಕರ ಗಾಣಿಗ, ವಾಸಂತಿ ಆರ್.ಶೆಟ್ಟಿ, ಹೇಮಲತಾ ಯು.ಶೆಟ್ಟಿ, ಗೀತಾ ಶಂಭು ಪೂಜಾರಿ, ಸಿಬ್ಬಂದಿಗಳಾದ ಗೋಪಾಲಕೃಷ್ಣ ಎಂ., ರಮಾನಂದ ನೀಲಾವರ, ಉದಯ ಆಚಾರ್, ರಾನಿ ಡಿಸೋಜ, ಶಂಕರ್ ಯು.ಎನ್., ಪದ್ಮನಾಭ, ವಿಶ್ವನಾಥ್ ಶೆಟ್ಟಿ, ಗಣೇಶ್ ಪೂಜಾರಿ ಎಂಬವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶಾಂತವೀರ ಶಿವಪ್ಪ ಎಲ್ಲ 18 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದರು. ಸರಕಾರದ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಜಯರಾಂ ಶೆಟ್ಟಿ ವಾದಿಸಿದರು.

ಇತ್ತೀಚಿನ ಸುದ್ದಿ