5:55 AM Wednesday 20 - August 2025

ಅಲರ್ಟ್: ವಿಮಾನ ಪ್ರಯಾಣಿಕರಿಗೆ ಅಗತ್ಯದ ಸೂಚನೆ! ಇನ್ಮುಂದೆ 1 ಬ್ಯಾಗ್ ಮಾತ್ರ ಕೊಂಡೊಯ್ಯಲು ಸಾಧ್ಯ!

25/12/2024

ವಿಮಾನಯಾನ ಮಾಡುವವರಿಗೆ ಇದೊಂದು ವಿಶೇಷ ಸೂಚನೆ. ವಿಮಾನದಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ಕೇವಲ 1 ಬ್ಯಾಗ್ ಮಾತ್ರ ಕ್ಯಾಬಿನ್ ಒಳಗೆ ಕೊಂಡೊಯ್ಯಬಹುದು. ಅವರು ಕೊಂಡೊಯ್ಯುವ ಬ್ಯಾಗ್ 7 ಕೆ.ಜಿ. ಮೀರಿರಬಾರದು. ಬ್ಯಾಗ್ 115 ಸೆಂ.ಮೀ.ಗಿಂತ ಹೆಚ್ಚಿರಬಾರದು ಎಂದು ನಾಗರಿಕ ವಿಮಾನ ಯಾನ ಭದ್ರತಾ ಬ್ಯೂರೋ ಬಿಸಿಎಎಸ್ ತಿಳಿಸಿದೆ. ಈ ನಿಯಮ ಮೇ 2ಕ್ಕಿಂತ ಮೊದಲ ಟಿಕೆಟ್ ಬುಕ್ ಮಾಡಿದವರಿಗೆ ಅನ್ವಯಿಸುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಏರುತ್ತಿರುವ ಹಿನ್ನೆಲೆ ಬಿಸಿಎಎಸ್ ಮತ್ತು ವಿಮಾನ ನಿಲ್ದಾಣದ ಭದ್ರತೆಯ ಜವಾಬ್ದಾರಿ ಹೊಂದಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಐಎಸ್‌ಎಫ್ ಹೊಸ ಹ್ಯಾಂಡ್ ಬ್ಯಾಗೇಜ್ ನೀತಿಗೆ ಸಂಬಂಧಿಸಿದ ನಿಯಮಗಳನ್ನು ಕಠಿಣಗೊಳಿಸಿದೆ.
ಹೊಸ ಬಿಸಿಎಎಸ್ ಹ್ಯಾಂಡ್ ಬ್ಯಾಗೇಜ್ ನೀತಿಯ ಪ್ರಕಾರ ಪ್ರಯಾಣಿಕರು ಈಗ ವಿಮಾನದೊಳಗೆ ಕೇವಲ ಒಂದು ಬ್ಯಾಗ್ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಈ ನಿಯಮ ಎಲ್ಲಾ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಪ್ರಯಾಣಿಕರಿಗೆ ಅನ್ವಯವಾಗುತ್ತದೆ. ಇನ್ನು ಫಸ್ಟ್ ಅಥವಾ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸುವವರು 10 ಕೆ.ಜಿ. ವರೆಗೆ ಕೊಂಡೊಯ್ಯಬಹುದು.

ಮೇ 2ಕ್ಕಿಂತ ಮೊದಲು ಬುಕ್ ಮಾಡಿದ ಎಕಾನಮಿ ಪ್ರಯಾಣಿಕರು 8 ಕೆಜಿ, ಪ್ರೀಮಿಯಂ ಎಕಾನಮಿ ಪ್ರಯಾಣಿಕರು 10 ಕೆಜಿ ಮತ್ತು ಬಿಸಿನೆಸ್ ಕ್ಲಾಸ್‌ನ ಪ್ರಯಾಣಿಕರು 12 ಕೆಜಿ ತೂಕದ ಬ್ಯಾಗ್ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version