ಬೈಕ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾಪು: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತರನ್ನು ಕಟಪಾಡಿ ಸಮೀಪದ ಸರಕಾರಿ ಗುಡ್ಡೆಯ ನಿವಾಸಿ, ಹೂವಿನ ವ್ಯಾಪಾರಿ ಇಕ್ಬಾಲ್(32) ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ಸು, ಬೈಕಿಗೆ ಡಿಕ್ಕಿ ಹೊಡೆಯುತ್ತೆನ್ನಲಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw