ಓವರ್ ಟೇಕ್ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ತಾಯಿ—ಮಗಳಿಗೆ ಗಂಭೀರ ಗಾಯ: ಉದ್ರಿಕ್ತ ಜನರ ಆಕ್ರೋಶಕ್ಕೆ ಬಸ್ ನ ಗಾಜು ಪುಡಿಪುಡಿ
ಮೂಡುಬಿದಿರೆ: ಕಾಲೇಜು ಬಸ್ ನ್ನು ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ದ್ವಿಚಕ್ರ ವಾಹನದಲ್ಲಿದ್ದ ತಾಯಿ, ಮಗಳು ಗಾಯಗೊಂಡಿರುವ ಘಟನೆ ಮೂಡುಬಿದಿರೆಯ ತೋಡಾರ್ ಎಂಬಲ್ಲಿ ನಡೆದಿದೆ.
ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಬಸ್ ನ ಗಾಜನ್ನು ಒಡೆದು ಹಾಕಿ, ಖಾಸಗಿ ಬಸ್ ಗಳ ವಿಪರೀತ ವೇಗದ ಚಾಲನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆಯು ನಡೆಯಿತು.
ಮಾಸ್ಟರ್ ಎಂಬ ಹೆಸರಿನ ಬಸ್ ಮೂಡುಬಿದಿರೆಯಿಂದ ಮಂಗಳೂರಿನತ್ತ ತೆರಳುತ್ತಿತ್ತು. ತೋಡಾರ್ ಮೈಟ್ ಕಾಲೇಜು ಎದುರು ಕಾಲೇಜು ಬಸ್ಸೊಂದನ್ನು ಓವರ್ ಟೇಕ್ ಮಾಡಲು ಬಸ್ ಚಾಲಕ ವಿಪರೀತವಾಗದಿಂದ ಬಸ್ ನ್ನು ಮುನ್ನುಗ್ಗಿಸಿದ್ದು, ಈ ವೇಳೆ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ದ್ವಿಚಕ್ರ ವಾಹನದಲ್ಲಿದ್ದ ತಾಯಿ—ಮಗಳಿಗೆ ಗಂಭೀರವಾಗಿ ಗಾಯವಾಗಿದೆ. ಅಪಘಾತದ ತಕ್ಷಣವೇ ಬಸ್ ಚಾಲಕ ಪರಾರಿಯಾಗಿದ್ದಾನೆ.
ಖಾಸಗಿ ಬಸ್ ಗಳ ಮಿತಿಯಿಲ್ಲದ ವೇಗದಿಂದ ಆಕ್ರೋಶಗೊಂಡಿರುವ ಸಾರ್ವಜನಿಕರು ಬಸ್ ನ ಗಾಜು ಒಡೆದು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಬಸ್ ನ ಓನರ್ ಸ್ಥಳಕ್ಕೆ ಬರುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: