ಓವರ್ ಟೇಕ್ ಮಾಡುವ ಭರದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್! - Mahanayaka
2:18 PM Wednesday 20 - August 2025

ಓವರ್ ಟೇಕ್ ಮಾಡುವ ಭರದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್!

bengaluru 4
07/12/2023


Provided by

ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪಾತಪಾಳ್ಯದಿಂದ ಬಾಗೇಪಲ್ಲಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಬಸ್ಸಿನಡಿಯಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಪಾತಪಾಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ