10:04 PM Thursday 21 - August 2025

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾ ವೈರಸ್ ಗೆ ಬಲಿ!

nifa
15/09/2024

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಮೂಲದ ವಿದ್ಯಾರ್ಥಿಯೊಬ್ಬ ನಿಫಾ ವೈರಸ್ ಗೆ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ.

ಕೇರಳದ ಮಲಪುರಂ ಮೂಲದ 24 ವರ್ಷ ವಯಸ್ಸಿನ ವಿದ್ಯಾರ್ಥಿ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತ  ಕಾಲಿಗೆ ಪೆಟ್ಟು ಬಿದ್ದ ಹಿನ್ನೆಲೆ ಆಗಸ್ಟ್ 25ರಂದು ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದ. ಸದ್ಯ ಮೃತಪಟ್ಟಿರುವ ವಿದ್ಯಾರ್ಥಿಗೆ ಸಪ್ಟೆಂಬರ್ 5ರಂದು ಜ್ವರ ಕಾಣಿಸಿಕೊಂಡಿದ್ದು, ಸೆಪ್ಟೆಂಬರ್ 6ರಂದು ವಾಂತಿ ಶುರುವಾಗಿದೆ. ಬಳಿಕ ಸಪ್ಟೆಂಬರ್ 7ರಂದು ವಿದ್ಯಾರ್ಥಿಗೆ ಅನಾರೋಗ್ಯ ಗಂಭೀರವಾಗಿದೆ.  ಕೂಡಲೇ ಅವರನ್ನು MES ಪ್ರೈವೇಟ್ ಮೆಡಿಕಲ್ ಕಾಲೇಜಿನ ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ಸೆಪ್ಟಂಬರ್ 8ರಂದು ವಿದ್ಯಾರ್ಥಿ ನಿಫಾ ವೈರಸ್ ಗೆ ಬಲಿಯಾಗಿದ್ದಾನೆ ಎಂದು ವರದಿಯಾಗಿದೆ.

ಈ ಘಟನೆಯ ಬೆನ್ನಲ್ಲೇ ರಾಜ್ಯದಲ್ಲಿ ಕೇಂದ್ರ ಆರೋಗ್ಯಾಧಿಕಾರಿಗಳ ಸಮ್ಮುಖದಲ್ಲಿ ಇಂದು ಮಹತ್ವದ ಸಭೆ ನಡೆದಿದೆ. ನಿಫಾಕ್ಕೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕಕ್ಕೆ ಬಂದವರ ಬಗ್ಗೆ ಎಚ್ಚರ ವಹಿಸಲು ಸೂಚನೆ ನೀಡಲಾಗಿದೆ.

ನಿಫಾಗೆ ಬಲಿಯಾದ ವಿದ್ಯಾರ್ಥಿ ಸಂಪರ್ಕಕ್ಕೆ ಬಂದ 70 ಪ್ರೈಮರಿ ಕಾಂಟ್ಯಾಕ್ಟ್ ಇದ್ದು ಈ ಎಲ್ಲರೂ ಕೂಡ ಕೇರಳದವರು ಎಂಬ ಮಾಹಿತಿ ಲಭ್ಯವಾಗಿದೆ

ಸೆ.16ರಂದು ಆರೋಗ್ಯ ಇಲಾಖೆ ತುರ್ತು ಸಭೆ ಕರೆದಿದೆ. ವಿದ್ಯಾರ್ಥಿಯ ಪ್ರೈಮರಿ ಸಂಪರ್ಕಿತರನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಮುಂದಾಗಿದೆ. ಇನ್ನೂ ಕೇರಳ ಸರ್ಕಾರದಿಂದಲೂ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪಡೆದುಕೊಳ್ಳುತ್ತಿದೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version