ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ ಕು.ವಿದ್ಯಾ ಬಿ. ಬಾಜಿನಡ್ಕಗೆ ಸನ್ಮಾನ

ಸುಳ್ಯ: ಶ್ರೀ ಆದಿ ನಾಗಬ್ರಹ್ಮಮೊಗೇರ್ಕಳ ದೈವ ಸ್ಥಾನ ಟ್ರಸ್ಟ್ (ರಿ.) ಹಾಗೂ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಸೇವಾ ಸಮಿತಿ ಬಾಜಿನಡ್ಕ ಇದರ ಆಶ್ರಯದಲ್ಲಿ ಅರಂತೋಡು ನೆಹರೂ ಸ್ಮಾರಕ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಈ ಬಾರಿಯ ಪರೀಕ್ಷೆಯಲ್ಲಿ 577 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ ಕು.ವಿದ್ಯಾ ಬಿ. ಬಾಜಿನಡ್ಕ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕೇಶವ ಮಾಸ್ಟರ್ ಸುಳ್ಯ ನಿವೃತ್ತ ಶಿಕ್ಷಕರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮನ್ಸ ಮುಗೇರ ಹಾಗೂ ಊರಿನ ಗಣ್ಯರು ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚರಣ್ ಸುಳ್ಳಿ ನಿರೂಪಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97