7:32 AM Wednesday 27 - August 2025

ಪ್ರತಿಭಾನ್ವಿತ ಯುವಕ ನೇಣು ಬಿಗಿದುಕೊಂಡು ಸಾವಿಗೆ ಶರಣು!

swaraj
31/08/2023

ಯುವಕನೊಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ.

ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ಸಾವಿಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದ ಈತನ ಮೃತದೇಹ ಇಂದು ಪುದುವೆಟ್ಟುವಿನಲ್ಲಿರುವ ಅವರ ಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅತ್ಯುತ್ತಮ ಕಬಡ್ಡಿ ಆಟಗಾರನಾಗಿದ್ದ ಈತ ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version