ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಟಾಟಾ ಏಸ್ ವಾಹನ: ಬಾಲಕ ಸಾವು - Mahanayaka
4:03 PM Tuesday 16 - December 2025

ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಟಾಟಾ ಏಸ್ ವಾಹನ: ಬಾಲಕ ಸಾವು

chamarajapete
13/10/2024

ಬೆಂಗಳೂರು:  ಮನೆ ಎದುರು ಆಟವಾಡುತ್ತಿದ್ದ ಬಾಲಕ ಆಯತಪ್ಪಿ ಬಿದ್ದಿದ್ದು, ಆತನ ತಲೆಯ ಮೇಲೆಯೇ ಟಾಟಾ ಏಸ್ ವಾಹನ ಹರಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ.

ಬಾಲಕ ತನ್ನ ಮನೆಯ ಎದುರು ಆಟವಾಡುತ್ತಿದ್ದ. ಯಾರನ್ನೋ ಕೂಗಿಕೊಂಡು ಓಡುವ ಸಂದರ್ಭದಲ್ಲಿ ಮನೆಯ ಪಕ್ಕ ನಿಲ್ಲಿಸಿದ್ದ ಬೈಕ್ ಗೆ ಆತನ ಕೈತಾಗಿದ್ದು, ಬಾಲಕ ಆಯತಪ್ಪಿ ರಸ್ತೆಗೆ ಬಿದ್ದಿದ್ದಾನೆ. ಇದೇ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಟಾಟಾ ಏಸ್ ವಾಹನ ಬಾಲಕನ ತಲೆಯ ಮೇಲೆ ಹರಿದಿದೆ.

ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ