ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ - Mahanayaka
2:03 AM Tuesday 27 - February 2024

ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

thumakur
10/02/2024

ತುಮಕೂರು: ಶಿಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ.

ಮರಿಯಪ್ಪ (47) ಕೊಲೆಯಾದ ಶಿಕ್ಷಕರಾಗಿದ್ದಾರೆ. ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿಯ ಕುಳ್ಳಿನಂಜಯ್ಯಪಾಳ್ಯದ ನಿವಾಸಿಯಾಗಿದ್ದ ಮರಿಯಪ್ಪ, ಮೋದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದರು.

ಇಂದು ಬೆಳಗ್ಗಿನಜಾವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೈ ಕತ್ತರಿಸಿ, ತಲೆಭಾಗಕ್ಕೆ ಬಲವಾಗಿ ಹೊಡೆದು ಭೀಕರ ಕೊಲೆ ಮಾಡಿದ್ದಾರೆ.

ಸ್ಥಳಕ್ಕೆ ಎಎಸ್ ಪಿ ಮರಿಯಪ್ಪ, ಕುಣಿಗಲ್ ಡಿವೈಎಸ್ ಪಿ ಓಂಪ್ರಕಾಶ್ ಹಾಗೂ ಇನ್ಸ್ ಪೆಕ್ಟರ್ ನವೀನ್ ಗೌಡ ಭೇಟಿ ಪರಿಶೀಲನೆ ನಡೆಸಿದರು.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ