ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ: ಐವರು ಸಜೀವ ದಹನ - Mahanayaka
2:59 PM Saturday 12 - October 2024

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ: ಐವರು ಸಜೀವ ದಹನ

mathura
12/02/2024

ಮಥುರಾ: ಕಾರು ಹಾಗೂ ಬಸ್ ನ ನಡುವೆ ನಡೆದ ಭೀಕರ ಅಪಘಾತದಲ್ಲಿ  ಐವರು ಸಜೀವ ದಹನವಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ನಡೆದಿದೆ.

ಮಹಾವನ್​ ಪೊಲೀಸ್​ ಠಾಣೆ ವ್ಯಾಪ್ತಿಯ ಆಗ್ರಾ-ನೋಯ್ಡಾ ಕ್ಯಾರೇಜ್ ಮಾರ್ಗದ 117 ನೇ ಮೈಲಿಗಲ್ಲು ಬಳಿ ಈ ಭೀಕರ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಮೊದಲಿಗೆ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಆ ನಂತರ ಬಸ್​ಗೆ ಡಿಕ್ಕಿ ಹೊಡೆದಿದೆ. ಕ್ಷಣಾರ್ಧದಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಐವರು ಸಜೀವ ದಹನವಾಗಿದ್ದಾರೆ.

ಕಾರಿನಲ್ಲಿದ್ದವರು ಆಗ್ರಾದಿಂದ ನೋಯ್ಡಾಗೆ ಹೋಗುತ್ತಿದ್ದರು. ಬಸ್ ಬಿಹಾರದಿಂದ ದೆಹಲಿ ಕಡೆಗೆ ಚಲಿಸುತ್ತಿತ್ತು. ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ.

ಮೃತರ ಗುರುತನ್ನು ಪತ್ತೆ ಹಚ್ಚಲಾಗುತ್ತಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿ ಸಾವಿಗೆ ಸಂತಾಪ ಸೂಚಿಸಿ ಗಾಯಗೊಂಡವರಿಗೆ ನೆರವು ನೀಡುವಂತೆ ಆದೇಶಿಸಿದ್ಧಾರೆ.

ಇತ್ತೀಚಿನ ಸುದ್ದಿ