ಬೆಂಗಳೂರಿನಲ್ಲಿ ಭೀಕರ ಅಪಘಾತ: ಮಹಿಳೆಯ ತಲೆ ಛಿದ್ರ - Mahanayaka
12:56 AM Wednesday 15 - April 2026

ಬೆಂಗಳೂರಿನಲ್ಲಿ ಭೀಕರ ಅಪಘಾತ: ಮಹಿಳೆಯ ತಲೆ ಛಿದ್ರ

bengalore
03/04/2023

ಬೆಂಗಳೂರು: ನಗರದ ನಾಯಂಡಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅದೃಷ್ಟವಶಾತ್ ಮಗು ಹಾಗೂ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಮೆಂಟ್ ತುಂಬಿದ್ದ ಲಾರಿ ಬೈಕ್​​ ಮೇಲೆ ಹರಿದು ಬಳಿಕ ಕೆಎಸ್ ​ಆರ್​ಟಿಸಿ ಬಸ್​ ಗೆ ಡಿಕ್ಕಿ ಹೊಡೆದೆ. ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಅನುಷಾ ತಲೆ ಛಿದ್ರವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಅಪಘಾತದಲ್ಲಿ ಮೃತ ಅನುಷಾ ತಾಯಿ ವೃದ್ಧೆ ವನಜಾಕ್ಷಿ ಹಾಗೂ ಮಗ ಆರ್ಯಗೆ ಗಂಭೀರ ಗಾಯಗಳಾಗಿವೆ.

ಮಂಡ್ಯ ಮೂಲದ ಅನುಷಾ ಸಾವಿಗೀಡಾದ ಮಹಿಳೆ. ಈಕೆ ತನ್ನ ತಾಯಿ ಮತ್ತು 7 ವರ್ಷದ ಮಗುವನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ದೀಪಾಂಜಲಿನಗರ ಕಡೆಯಿಂದ ಬರುತ್ತಿದ್ದರು. ಈ ಸಂದರ್ಭದಲ್ಲಿ ಸಿಮೆಂಟ್ ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಬೈಕ್​ ಮೇಲೆ ಹರಿದು ಬಳಿಕ ಕೆಎಸ್​ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಅನುಷಾ ತಲೆ ಮೇಲೆ ಹರಿದಿದೆ. ಇನ್ನು ಅಜ್ಜಿ ವನಜಾಕ್ಷಿಯ ಎರಡು ಕಾಲುಗಳ ಕಟ್ ಆಗಿದ್ದು, ಮಗುವಿಗೂ ಸಹ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನು ನೋಡಿದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಪ್ರತಿಭಟನೆ ನಡೆಸಿದರು. ಕೆಎಸ್​ ಆರ್ ​ಟಿಸಿ ಬಸ್ ​ಗೆ ಡಿಕ್ಕಿ ಹೊಡೆದಿದ್ದರಿಂದ ಲಾರಿ ನಿಂತಿದೆ. ಇಲ್ಲದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎನ್ನಲಾಗಿದೆ. ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಲಾರಿಗೆ ಕಲ್ಲು ತೂರಿದ್ದು, ಮುಂಭಾಗದ ಗಾಜುಗಳು ಒಡೆದುಹೋಗಿವೆ.

ಪೊಲೀಸರು ಆಗಮಿಸಿ ಪ್ರತಿಭಟನೆಕಾರರನ್ನು ಚದುರಿಸಲು ಪೊಲೀಸರು  ಲಾಠಿ ಬೀಸಿದರು. ಇನ್ನು ಘಟನೆ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್​ ಆಗಿದ್ದು, ಆ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಚಾಲಕನ್ನು ಹಿಡಿಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮತ್ತೊಂದೆಡೆ ನಿನ್ನೆ ಸಂಜೆ ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಅಪಘಾತ ಸಂಭವಿಸಿದ್ದು, ಟೈರ್ ಸ್ಫೋಟಗೊಂಡು ಬೈಕ್‌ ಪಲ್ಟಿಯಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೈಕ್‌ ನಲ್ಲಿ ತೆರಳುತ್ತಿದ್ದ ಆನಂದ್‌, ಸುಲೋಚನಾ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ