ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಮಂದಿ ಸಾವು, 59ಕ್ಕೂ ಹೆಚ್ಚು ಜನರಿಗೆ ಗಾಯ

06/02/2024
ಭೂಪಾಲ್: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿ, 59ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಹರ್ದಾ ನಗರದಿಂದ 2 ಕಿ.ಮೀ. ದೂರದಲ್ಲಿರುವ ಮಗರ್ಧ ರೋಡ್ ಕಾರ್ಖಾನೆಯಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಲು ಕಾರಣ ಏನು ಎಂಬುದು ಇದುವರೆಗೆ ತಿಳಿದು ಬಂದಿಲ್ಲ.
ಹಲವು ಮಂದಿ ಕಾರ್ಖಾನೆ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಸ್ಪೋಟದ ಪರಿಣಾಮ ಕಾರ್ಖಾನೆ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.