ಮಲಗಿದ್ದ ಕಾರ್ಮಿಕನ ಮೇಲೆ ಹರಿದ ಟಿಪ್ಪರ್: ಕಾರ್ಮಿಕ ಸ್ಥಳದಲ್ಲೇ ಮೃತ್ಯು

24/11/2023
ಉಡುಪಿ: ಮಲಗಿದ್ದ ಕಾರ್ಮಿಕನ ಮೇಲೆ ಹರಿದ ಟಿಪ್ಪರ್ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಬಂಕ್ ಆವರಣದಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ನಡೆದಿದೆ.
ಮೃತ ಕಾರ್ಮಿಕನನ್ನು ಸಾಗರ ತಾಲೂಕಿನ ಕೊರ್ಲಿ ಕೊಪ್ಪ ನಿವಾಸಿ ಶಿವರಾಜ್ ಎಂದು ಗುರುತಿಸಲಾಗಿದೆ. ಇವರು ಲಾರಿ ಕಾರ್ಮಿಕರಾಗಿದ್ದು, ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದರು.
ಪೆಟ್ರೋಲ್ ಹಾಕಿಸಿಕೊಂಡು ಹೋಗುತ್ತಿದ್ದ ಟಿಪ್ಪರ್ ಚಾಲಕ ಶಿವರಾಜ್ ಮೈಮೇಲೆ ಚಲಾಯಿಸಿಕೊಂಡು ಹೋಗಿದ್ದಾನೆ. ಇದರ ಪರಿಣಾಮ ಶಿವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.