ನೀರಿನಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಆಟೋ ಚಾಲಕನಿಂದ ಟ್ರೈನಿ ನರ್ಸ್ ಮೇಲೆ ಅತ್ಯಾಚಾರ - Mahanayaka
12:13 AM Friday 12 - September 2025

ನೀರಿನಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಆಟೋ ಚಾಲಕನಿಂದ ಟ್ರೈನಿ ನರ್ಸ್ ಮೇಲೆ ಅತ್ಯಾಚಾರ

mumbai
27/08/2024

ಮುಂಬೈ: ಕುಡಿಯುವ ನೀರಿನಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಟ್ರೈನಿ ನರ್ಸ್ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ನಡೆದಿದೆ.


Provided by

ಟ್ರೈನಿ ನರ್ಸ್ ಆಟೋದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕುಡಿಯುವ ನೀರು ಕೇಳಿದ್ದ ಚಾಲಕ ನೀರಿನಲ್ಲಿ ಮತ್ತು ಬರುವ ಪದಾರ್ಥ ಸೇರಿಸಿದ್ದ. ಆಕೆ ನೀರು ಕುಡಿದ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದು, ಈ ವೇಳೆ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ.

ಯುವತಿಗೆ ಪ್ರಜ್ಞೆ ಬಂದ ಬಳಿಕ ಅತ್ಯಾಚಾರ ನಡೆದಿರುವ ವಿಚಾರ ತಿಳಿಯಿತು. ತಕ್ಷಣವೇ ಆಕೆ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.
ಸದ್ಯ ನೊಂದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಸಿಸಿ ಕ್ಯಾಮರಾಗಳನ್ನು ಜಾಲಾಡುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ