ತೆರೆದ ಮ್ಯಾನ್ಹೋಲ್ ಗೆ ಬಿದ್ದು ಎರಡು ವರ್ಷದ ಬಾಲಕ ದಾರುಣ ಸಾವು!

ದೆಹಲಿ: ತೆರೆದ ಮ್ಯಾನ್ಹೋಲ್ ಗೆ ಬಿದ್ದು ಎರಡು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುಗ್ರಾಮದ ಸೆಕ್ಟರ್ 37ರಲ್ಲಿ ನಡೆದಿದೆ.
ಮೃತ ಬಾಲಕನನ್ನು ಪ್ರದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಬಾಲಕನ ತಂದೆ ಭಗತ್ ಕುಮಾರ್ ನೇಪಾಳ ಮೂಲದವರಾಗಿದ್ದು, ಕಳೆದ ಎರಡು ವರ್ಷಗಳಿಂದ ಸೀಹಿ ಗ್ರಾಮದಲ್ಲಿ ವಾಸವಾಗಿದ್ದು, ಟೀ ಅಂಗಡಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಬಾಲಕನ ತಂದೆಯ ಪ್ರಕಾರ , ಬಾಲಕ ಆಟವಾಡುತ್ತಿದ್ದ ವೇಲೆ ಅಂಗಡಿಯಿಂದ ದೂರದಲ್ಲಿರುವ 50–ಅಡಿ ಆಳದ ತೆರೆದ ಚರಂಡಿಗೆ ಬಿದ್ದಿದ್ದಾನೆ. ಸ್ವಲ್ಪ ಸಮಯ ಹುಡುಕಿದ ನಂತರ, ನಾವು ಅವನನ್ನು ತೆರೆದ ಚರಂಡಿಯಲ್ಲಿ ನೋಡಿದ್ದೇವೆ. ಕೂಡಲೇ 102ಕ್ಕೆ ಕರೆ ಮಾಡಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದೆವು. ಆದರೆ, ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಸಂಬಂಧಪಟ್ಟ ಇಲಾಖೆಯವರು ಚರಂಡಿಯನ್ನು ತೆರೆದಿಟ್ಟು ತೀವ್ರ ನಿರ್ಲಕ್ಷ್ಯವಹಿಸಿದ ಪರಿಣಾಮವಾಗಿ ಬಾಲಕ ಸಾವನ್ನಪ್ಪಿರುವುದಾಗಿ ಗುರುವಾರದಂದು ಮೃತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಭಗತ್ ಕುಮಾರ್ ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್ 283 ಮತ್ತು 304ಎ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮಗುವಿನ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth