12:52 AM Monday 15 - December 2025

ಅಲೆದಾಡುವ ಆತ್ಮ ನಿಮ್ಮನ್ನು ಬಿಡಲ್ಲ: ಮೋದಿ ವಿರುದ್ಧ ಮತ್ತೆ ತಿರುಗಿ ಬಿದ್ದ ಶರದ್ ಪವಾರ್

11/06/2024

ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಸಂಸ್ಥಾಪಕ ಶರದ್ ಪವಾರ್ ತಿರುಗೇಟು ನೀಡಿದ್ದಾರೆ. ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು ಎಂದು ಹೇಳಿದ್ದಾರೆ.
ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಶರದ್ ಪವಾರ್ ಮೇಲೆ ವಾಗ್ದಾಳಿ ನಡೆಸಿದ್ದು ಶರದ್ ಪವಾರ್ ರನ್ನು ‘ಅಲೆದಾಡುವ ಆತ್ಮ’ ಎಂದು ಕರೆದಿದ್ದರು.

ಮಹಾರಾಷ್ಟ್ರದ ಅಹಮದ್‌ನಗರದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಸಿಪಿಯ ಮುಖ್ಯಸ್ಥ ಶರದ್ ಪವಾರ್, ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚಿಸುವ ಬಗ್ಗೆ ಪಿಎಂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
“ದೇಶದ ಜನರು ಅವರಿಗೆ ಬಹುಮತ ನೀಡಲಿಲ್ಲ, ಅವರು ಸರ್ಕಾರ ರಚಿಸುವಾಗ, ಅವರು ಸಾಮಾನ್ಯ ಜನರ ಒಪ್ಪಿಗೆ ಪಡೆದಿದ್ದಾರೆಯೇ? ಅವರು ಬಿಹಾರದ ಮುಖ್ಯಮಂತ್ರಿಯ ಸಹಾಯ ತೆಗೆದುಕೊಂಡಿದ್ದಾರೆ. ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ ಎಲ್ಲಿ ಹೋದರೂ ಕೂಡಾ ಭಾರತ ಅಥವಾ ಭಾರತ ಸರ್ಕಾರ ಎಂದು ಹೇಳಿಲ್ಲ.
ಬರೀ ಮೋದಿ ಸರ್ಕಾರ, ಮೋದಿಯ ಗ್ಯಾರಂಟಿ ಎಂದು ಹೇಳಿಕೊಂಡು ಬಂದಿದ್ದಾರೆ” ಎಂದು ತಿಳಿಸಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version