ಕೊನೆಗೂ ದುಬೈ ಏರ್ ಪೋರ್ಟ್ ನಲ್ಲಿ ಪೂರ್ಣ ಪ್ರಮಾಣದಲ್ಲಿ ವಿಮಾನ ಹಾರಾಟ ಪ್ರಾರಂಭ

ಭಾರೀ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಈಗ ಪೂರ್ಣ ಪ್ರಮಾಣದಲ್ಲಿ ಮತ್ತೆ ಕಾರ್ಯಾರಂಭವಾಗಿದೆ. ಕಳೆದ ಒಂದು ವಾರದಲ್ಲಿ ಮಳೆಯಿಂದ ವಿಮಾನ ನಿಲ್ಧಾಣದ ಒಳಗೆ ಅಥವಾ ಹೊರಗೆ ಹೋಗಲು ಸಾಧ್ಯವೇ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು.
ಯುಎಇಯಲ್ಲಿ ಕಳೆದ 75 ವರ್ಷಗಳಲ್ಲಿಯೇ ಸುರಿದ ಭಾರಿ ಮಳೆ ಪರಿಣಾಮ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಸಮಸ್ಯೆ ಎದುರಾಗಿತ್ತು. ಸದ್ಯ ತ್ವರಿತ ಕ್ರಮ ಕೈಗೊಳ್ಳುವ ಮೂಲಕ ಕಾರ್ಯಾಚರಣೆಯನ್ನು ಮರು ಸ್ಥಾಪಿಸಲಾಗಿದೆ ದುಬೈ ಅಂತರರಾಷ್ಟ್ರೀಯ ವಿಮಾನ ಪ್ರಕಟನೆಯಲ್ಲಿ ತಿಳಿಸಿದೆ.
ಕಳೆದ ಒಂದು ವಾರದಲ್ಲಿ ಮಳೆಯಿಂದ ರನ್‌ವೇ ಸೇರಿದಂತೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ವಿಮಾನ ನಿಲ್ಧಾಣದ ಒಳಗೆ ಅಥವಾ ಹೊರಗೆ ಹೋಗಲು ಸಾಧ್ಯವೇ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth