ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಮಾನವೀಯತೆ ಮೆರೆದ ಟಿಕೆಟ್ ತಪಾಸಣಾ ಸಿಬ್ಬಂದಿ - Mahanayaka

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಮಾನವೀಯತೆ ಮೆರೆದ ಟಿಕೆಟ್ ತಪಾಸಣಾ ಸಿಬ್ಬಂದಿ

delivery
03/04/2024

ಗರ್ಭಿಣಿ ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಪ್ರಯಾಗ್ ರಾಜ್ ನ ದುರಂತೋ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ.

ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ವೇಳೆ ಟಿಕೆಟ್ ತಪಾಸಣಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಆಕೆಯ ನೆರವಿಗೆ ಧಾವಿಸಿದ್ದಾರೆ. ಮಹಿಳೆ ರೈಲಿನಲ್ಲಿಯೇ ಹೆರಿಗೆಯಾಗಿದ್ದು, ತಾಯಿ, ಮಗು ಆರೋಗ್ಯವಾಗಿದ್ದಾರೆ.

ಎಲ್ ಟಿಟಿ—ಪ್ರಯಾಗ್ ರಾಜ್ ದುರಂತೋ ಎಕ್ಸ್ ಪ್ರೆಸ್ ನಲ್ಲಿ ಮಹಿಳೆಯೊಬ್ಬರು ಸುರಕ್ಷಿತವಾಗಿ ಮಗುವಿಗೆ ಜನ್ಮ ನೀಡಿದ್ದಾರೆ. ಈಕೆಗೆ ಟಿಕೆಟ್ ತಪಾಸಣಾ ಸಿಬ್ಬಂದಿ ಮತ್ತು ಪ್ರಯಾಣಿಕರು ಸಹಾಯ ಮಾಡಿದ್ದಾರೆ. ಟಿಕೆಟ್ ತಪಾಸಣಾ ಸಿಬ್ಬಂದಿಗಳಾದ ಶ್ರೀನಂದ್ ಬಿಹಾರಿ ಮೀನಾ, ಅಲೋಕ್ ಶರ್ಮಾ, ರಾಜಕರಣ್ ಯಾದವ್, ಇಂದ್ರ ಕುಮಾರ್ ನೆರವಾದರು ಎಂದು ಟ್ವಿಟ್ಟರ್ ನಲ್ಲಿ ರೈಲ್ವೆ ಇಲಾಖೆ ಬರೆದುಕೊಂಡಿದೆ.


Provided by

ಈ ಘಟನೆಗೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಯ ಕೆಲಸವನ್ನು ಶ್ಲಾಘಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ