ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು : ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲು

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಅದರಲ್ಲಿ ಖಾಸಗಿ ವಾಹನದಲ್ಲಿ ಬಂದಿದ್ದ ಧರ್ಮಸ್ಥಳದಿಂದ ಬೆಂಗಳೂರಿಗೆ ಸಾಗುತ್ತಿದ್ದ ಗರ್ಭಿಣಿ ಮಹಿಳೆ ಚೈತ್ರಾ ಎಂಬವರು ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು.
ಶುಕ್ರವಾರ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥತೆಗೊಂಡಿದ್ದರಿಂದ ಸ್ಥಳದಲ್ಲಿದ್ದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಫ್ ಅವರು ಅವರ ಅಂಬುಲೆನ್ಸ್ ನಲ್ಲಿ ವಾಹನ ದಟ್ಟಣೆಯಲ್ಲೂ ಸೈರನ್ ಹಾಕಿ ಮೂಡಿಗೆರೆ ಆಸ್ಪತ್ರೆಗೆ ತಂದು ದಾಖಲು ಮಾಡಿದರು.
ಇದರಿಂದ ಗರ್ಭಿಣಿ ಮಹಿಳೆಯನ್ನು ತುರ್ತು ಸಮಯದಲ್ಲಿ ಪ್ರಾಣ ಉಳಿಸಿದಂತಾಯಿತು ಎಂದು ಕುಟುಂಬದವರು ಆರೀಫ್ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw