8:40 AM Wednesday 27 - August 2025

ಮತ್ತೊಬ್ಬರ ಜೀವ ಉಳಿಸಲು ತನ್ನ ಪ್ರಾಣವನ್ನೇ ನೀಡಿದ ಮಹಿಳೆ!

archana
17/09/2024

ಉಡುಪಿ: ಮತ್ತೊಬ್ಬರ ಜೀವ ಉಳಿಸಲು ಹೋಗಿ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ನೀಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ನಡೆದಿದೆ.

ಅರ್ಚನಾ ಕಾಮತ್ (34) ಮೃತಪಟ್ಟವರಾಗಿದ್ದಾರೆ. 69 ವರ್ಷ ವಯಸ್ಸಿನ ತನ್ನ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದ ಅವರು ಯಕೃತ್ ದಾನ ಮಾಡಿದ್ದರು.

ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು, ಈ ವೇಳೆ ಸೋಂಕಿಗೆ ತುತ್ತಾದ ಅವರು ಇದೀಗ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಅರ್ಚನಾ ಅವರು ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು. ತಮ್ಮ ಪತಿಯ ಕುಟುಂಬದ ಸಂಬಂಧಿಕರಿಗೆ ಯಕೃತ್ತಿನ ಕಸಿಯ ಅಗತ್ಯವಿತ್ತು. ಆದರೆ ಕುಟುಂಬದಲ್ಲಿ ಯಾರ ರಕ್ತದ ಮಾದರಿಯೂ ಮ್ಯಾಚ್ ಆಗಿರಲಿಲ್ಲ.  ಕೊನೆಗೆ ಅರ್ಚನಾ ಅವರ ರಕ್ತದ ಮಾದರಿ ಹೊಂದಾಣಿಕೆಯಾಗಿತ್ತಂತೆ.  ಬೆಂಗಳೂರಿನ ಆಸ್ಪತ್ರೆಯಲ್ಲಿ 12 ದಿನಗಳ ಹಿಂದೆ ಶಸ್ತ್ರ ಚಿಕಿತ್ಸೆ ನಡೆದಿತ್ತು. ಅರ್ಚನಾ ಅವರ ಯಕೃತ್ತಿನ ಒಂದು ಭಾಗವನ್ನು ಯಶಸ್ವಿಯಾಗಿ ಕಸಿ ಮಾಡಲಾಗಿತ್ತು.

ಬಳಿಕ ಚೇತರಿಸಿಕೊಂಡಿದ್ದ ಅರ್ಚನಾ ಡಿಸ್ಚಾರ್ಜ್ ಆಗಿದ್ದರು. ಕೆಲವು ದಿನಗಳ ಹಿಂದೆ ಅವರಿಗೆ ಜ್ವರ ಕಾಣಿಸಿಕೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version